ಬೆಂಗಳೂರು:- ಬಿಗ್ ಬಾಸ್ ಕಾರ್ಯಕ್ರಮದ ಇತಿಹಾಸದಲ್ಲೇ 10 ಎಪಿಸೋಡ್ಗಳನ್ನು ಒಬ್ಬರೇ ಹೋಸ್ಟ್ ಮಾಡಿದ ಉದಾಹರಣೆಯೇ ಇಲ್ಲ, ಈ ರೆಕಾರ್ಡ್ ಬರೆದವರು ಕಿಚ್ಚ ಸುದೀಪ್ ಮಾತ್ರ ಎಂದು ಚಾನೆಲ್ ಮುಖ್ಯಸ್ಥರೇ ಹೇಳಿದ್ದಾರೆ.
ಆದ್ರೆ ಇದೀಗ ಸುದೀಪ್, ಬಿಗ್ ಬಾಸ್ ನಿರೂಪಣೆಗೆ ವಿದಾಯ ಹೇಳುವ ನಿರ್ಧಾರ ಮಾಡಿದ್ದಾರೆ. ಕಿಚ್ಚ ಸುದೀಪ್ ಬಿಗ್ ಬಾಸ್ ಗೆ ಗುಡ್ ಬೈ ಹೇಳುತ್ತಿದ್ದಾರೆ.
ಕಿಚ್ಚ ಸುದೀಪ್ ನಿರೂಪಣೆ ಮಾಡಲು ಒಪ್ಪುತ್ತಿಲ್ಲ, ಬಿಗ್ ಬಾಸ್ ನಿರೂಪಣೆಗೆ ಗುಡ್ ಬೈ ಹೇಳುತ್ತಿರುವುದನ್ನು ಸ್ವತಃ ಘೋಷಿಸಿದ್ದಾರೆ.
ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 11 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ಬಿಗ್ ಬಾಸ್ ಕನ್ನಡ ನಿರೂಪಕನಾಗಿ ಇದು ನನ್ನ ಕೊನೆಯ ಆವೃತಿ. ಇಷ್ಟು ವರ್ಷಗಳ ಕಾಲ ಬಿಗ್ ಬಾಸ್ ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಿಜವಾಗಿಯೂ ನಂಬಿದ್ದೇನೆ. ಈ ಆವೃತಿ ಅತ್ಯುತ್ತಮ ಆಗುವಂತೆ ಮಾಡೋಣ. ಮುಂದೆ ನಿಮ್ಮೆಲ್ಲರನ್ನೂ ನಾನು ಮನರಂಜಿಸುತ್ತೇನೆ ಎಂದು ಸುದೀಪ್ ಹೇಳಿದ್ದಾರೆ. ಚಾನೆಲ್ ಮುಖ್ಯಸ್ಥರು ಕಿಚ್ಚನ ಮನವೊಲಿಕೆ ಮಾಡ್ತಾರಾ ? ಅನ್ನೋದನ್ನು ಕಾದು ನೋಡ್ಬೇಕಿದೆ.
ಜಾಗೃತಿ ಸುದ್ದಿ