ಜಾಗೃತಿ ಟೈಮ್ಸ್ ಸುದ್ದಿ:
ಕೆ.ಆರ್ ಪುರ: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶವಿದ್ದರೂ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿರುವ ಕ್ರಮ ತೀವ್ರ ಖಂಡನೀಯ ಎಂದು ಆದಿ ಜಾಂಭವ ಜನ ಸಂಘದ ಪ್ರಧಾನ ಕಾರ್ಯದರ್ಶಿ ಬಿಳಿಶಿವಾಲೆ ಮಾದೇಶ್ ತಿಳಿಸಿದರು.
ಕ್ಷೇತ್ರದ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆ ನೇತೃತ್ವದಲ್ಲಿ ವಹಿಸಿ ಅವರು ಮಾತನಾಡಿದರು, ಮಾದಿಗ ಸಮುದಾಯವು ಸುಮಾರು 30 ವರ್ಷಗಳ ಸತತ ಹೋರಾಟದ ಫಲವಾಗಿ ಅಕ್ಟೋಬರ್ 1 2024 ರಂದು ಸುಪ್ರೀಂಕೋರ್ಟ್ 7 ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠವು ಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿಯನ್ನು ನೀಡಲು ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ಐತಿಹಾಸಿಕ ತೀರ್ಪು ನೀಡಿದೆ.
ಇದರಿಂದ ಮೀಸಲಾತಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಒಳ ಮೀಸಲಾತಿಯನ್ನು ಸಚಿವ ಸಂಪುಟದಲ್ಲಿ ಅನುಮೋದಿಸಿ ಎಲ್ಲರಿಗೂ ಸಮಪಾಲು ಸಮಬಾಳು ರೀತಿಯಲ್ಲಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೇ ನ್ಯಾಯಯುತವಾಗಿ ಒಳಮೀಸಲಾತಿಯನ್ನು ಜಾರಿಗೊಳಿಸಬೇಕು, ಕಾಲಹರಣ, ಉದಾಸೀನತೆ ತೋರಿದಲ್ಲಿ ಮುಂದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ದ ಉಗ್ರ ನಡೆಸಲಾಗುವುದು ಎಂದು ಆದಿ ಜಾಂಭವ ಸಂಘ ಬೆಂ. ಪೂರ್ವ ತಾಲೂಕು ಅಧ್ಯಕ್ಷ ವಿ.ಕೃಷ್ಣ ಮೂರ್ತಿ ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಖಜಾಂಚಿ ಮುನೇಂದ್ರ, ಎ.ಗೋಪಾಲ್, ಮುಂಜುನಾಥ್, ಮುನಿರಾಜು, ಮುನಿಆಂಜಿ, ಶೋಭಾ, ವಿಮಲಾ ಹಾಜರಿದ್ದರು.