ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಮಗ ಮಾರ್ಕ್ ಶಂಕರ್, ಸಿಂಗಾಪೂರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದಾರೆ. ಮಾರ್ಕ್ ಶಂಕರ್ ಓದುತ್ತಿದ್ದ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮಾರ್ಕ್ ಶಂಕರ್ ಬೆಂಕಿಯಲ್ಲಿ ಸಿಲುಕಿದ್ದಾರೆ. ಈ ವೇಳೆ ಬೆಂಕಿ ಅವಘಡದಲ್ಲಿ ಅವರ ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ಹೋದ ಹಿನ್ನೆಲೆ ತೀವ್ರ ಅನಾರೋಗ್ಯಕ್ಕಿಡಾಗಿದ್ದಾರೆ.
ಸಿಂಗಾಪುರದ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಪುತ್ರ ಗಾಯಗೊಂಡಿದ್ದು, ಅಧಿಕೃತ ಪ್ರವಾಸವನ್ನು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮೊಟಕುಗೊಳಿಸಿದ್ದಾರೆ. ಘಟನೆಯಲ್ಲಿ ಪವನ್ ಕಲ್ಯಾಣ ಅವರ ಪುತ್ರ ಮಾರ್ಕ್ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಅವರು ಸಿಂಗಾಪುರದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.